alex Certify ಸುಗಮವಾಗಿ ನಡೆದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಗಮವಾಗಿ ನಡೆದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಮಾರ್ಚ್ 12 ರಿಂದ ಆರಂಭವಾದ ಸ್ಪರ್ಧಾತ್ಮಕ ಪರೀಕ್ಷೆ ಸುಗಮವಾಗಿ ನಡೆದಿದೆ.

1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ (ಕಡ್ಡಾಯ ಪತ್ರಿಕೆ-3) ವಿಷಯದ ಪರೀಕ್ಷೆ ನಿನ್ನೆ ನಡೆದಿದ್ದು, ರಾಜ್ಯದ 7 ಕೇಂದ್ರಗಳಲ್ಲಿ ನಡೆದ ಈ ಪರೀಕ್ಷೆಗೆ 29,569(ಶೇಕಡ 89.23) ಅಭ್ಯರ್ಥಿಗಳು ಹಾಜರಾಗಿದ್ದಾರೆ.

ಕರ್ನಾಟಕ ಪರೀಕ್ಷೆ ಪ್ರಾಧಿಕಾರದಿಂದ ನಡೆಸಲಾದ ಈ ಪರೀಕ್ಷೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ 7 ಜಿಲ್ಲಾ ಕೇಂದ್ರಗಳಲ್ಲಿ ನಡೆದಿದೆ. 33,139 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. 3570 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.

ಪರೀಕ್ಷಾರ್ಥಿಗಳಿಗೆ ವಸ್ತ್ರಸಂಹಿತೆ ನಿಗದಿ ಮಾಡಿದ್ದು, ಕೋವಿಡ್ ಮಾನದಂಡಗಳನ್ನು ಪಾಲಿಸುವುದರೊಂದಿಗೆ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 13 ರಂದು ಕಡ್ಡಾಯ ಪತ್ರಿಕೆ-1 ಕನ್ನಡ, ಕಡ್ಡಾಯ ಪತ್ರಿಕೆ-2 ಇಂಗ್ಲಿಷ್ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...