alex Certify BIG NEWS: ಕೊರೋನಾ 2 ನೇ ಅಲೆ ಆತಂಕ, 1 -5 ನೇ ತರಗತಿ ಪರೀಕ್ಷೆ ಇಲ್ಲದೇ ಪಾಸ್..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ 2 ನೇ ಅಲೆ ಆತಂಕ, 1 -5 ನೇ ತರಗತಿ ಪರೀಕ್ಷೆ ಇಲ್ಲದೇ ಪಾಸ್..?

ಬೆಂಗಳೂರು: ಒಂದರಿಂದ ಐದನೇ ತರಗತಿಗೆ ಪರೀಕ್ಷೆಯನ್ನು ರದ್ದು ಮಾಡುವ ಸಾಧ್ಯತೆ ಇದೆ. 6 -8 ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಿದ್ದು, 9 ನೇ ತರಗತಿ ಮಕ್ಕಳಿಗೆ ಮಲ್ಟಿಪಲ್ ಚಾಯ್ಸ್ ಮಾದರಿಯಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದಲ್ಲಿ ಕೊರೊನಾ ಎರಡನೆಯ ಅಲೆ ತೀವ್ರ ಆತಂಕವನ್ನುಂಟುಮಾಡಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಪದ್ಧತಿ ಪರಿಷ್ಕರಣೆಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಸೋಮವಾರದ ನಂತರ ಈ ಕುರಿತಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಒಂದರಿಂದ ಐದನೇ ತರಗತಿ ಮಕ್ಕಳನ್ನು ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡಲಿದ್ದು, ಆರರಿಂದ ಎಂಟನೇ ತರಗತಿ ಮಕ್ಕಳಿಗೆ ಕಲಿಕೆ ಬಗೆಗಿನ ಆಸಕ್ತಿ, ಚಟುವಟಿಕೆ ಆಧರಿಸಿ ಪಾಸ್ ಮಾಡಲಾಗುವುದು. 9 ನೇ ತರಗತಿ ಮಕ್ಕಳಿಗೆ ಮಲ್ಟಿಪಲ್ ಚಾಯ್ಸ್ ಮಾದರಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...