ಕಲಬುರಗಿ: ಕೊರೋನಾ ಸೋಂಕು ತಡೆಗೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ ಹಿನ್ನೆಲೆಯಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಇವತ್ತು, ಆಗಸ್ಟ್ 28 ಮತ್ತು ಆಗಸ್ಟ್ 29 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಮೊದಲ, ಮೂರನೇ ಮತ್ತು 5ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ. ಉಳಿದ ವಿಷಯಗಳ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಮುಂದೂಡಿಕೆ ಮಾಡಿದ ಪರೀಕ್ಷೆಗಳ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಲಾಗಿದೆ.