
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಶುಲ್ಕ ಪಾವತಿಗೆ ಡಿಸೆಂಬರ್ 23ರವರೆಗೆ ಕಾಲಾವಕಾಶ ನೀಡಲಾಗಿದೆ.
2024ರ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ -1(ವಾರ್ಷಿಕ ಪರೀಕ್ಷೆ)ಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸುವವರಿಗೆ ದಂಡ ಸಹಿತ ಶುಲ್ಕ ಪಾವತಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಡಿಸೆಂಬರ್ 23ರ ವರೆಗೆ ಕಾಲಾವಕಾಶ ವಿಸ್ತರಿಸಿದೆ.
ಈ ಮೊದಲು ಡಿಸೆಂಬರ್ 12ರ ವರೆಗೆ ಅವಕಾಶ ನೀಡಲಾಗಿದ್ದು, ಅದನ್ನು ಡಿಸೆಂಬರ್ 23ರ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.