ಬಳ್ಳಾರಿ : ಜಿಲ್ಲೆಯಲ್ಲಿ ಜ.20 ಮತ್ತು 21 ರಂದು ಕರ್ನಾಟಕ ಲೋಕಾಸೇವಾ ಆಯೋಗದ ವತಿಯಿಂದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ 230 (ಕಲ್ಯಾಣ ಕರ್ನಾಟಕ ವೃಂದ) ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ 1973ರ ಕಲಂ 144ರಲ್ಲಿನ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಬಂಧಿತ ಪ್ರದೇಶವೆಂದು ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಜ.20 ರಂದು ಮಧ್ಯಾಹ್ನ 02 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಜ.21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 11.30ರವರೆಗೂ ಮಧ್ಯಾಹ್ನ 02 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದ್ದು, ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.