alex Certify ನಾಳೆಯಿಂದ ‘KPSC’ ಹುದ್ದೆಗಳಿಗೆ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ‘KPSC’ ಹುದ್ದೆಗಳಿಗೆ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿ

ಶಿವಮೊಗ್ಗ : ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಡಿ. 16 ಮತ್ತು 17 ರಂದು ಪರೀಕ್ಷೆ ನಡೆಯಲಿದ್ದು, ನಗರದ ವಿವಿಧ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಿ.ಆರ್.ಪಿ.ಸಿ. 1973ರ ಕಲಂ 144ರನ್ವಯ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿದ್ದಾರೆ.

ಡಿ. 16 ರಂದು ಮಧ್ಯಾಹ್ನ 2.00 ರಿಂದ 4.00 ರವರೆಗೆ ನಗರದ ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನದ ಹತ್ತಿರ ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗದಲ್ಲಿ ಹಾಗೂ ಡಿ.17 ರಂದು ಬೆಳಗ್ಗೆ 10.00 ರಿಂದ 11.30ರವರೆಗೆ ನಗರದ ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನದ ಹತ್ತಿರ ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗದಲ್ಲಿ ಮತ್ತು ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಧ್ಯಾಹ್ನ 2.00 ರಿಂದ ಸಂಜೆ 4.00 ರವೆಗೆ ವಿದ್ಯಾನಗರ ಸಹ್ಯಾದ್ರಿ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜ್ ಮತ್ತು ಸೈನ್ಸ್ ಫೀಲ್ಡ್ ಸರ್ಕಾರಿ ಪಿ.ಯು.ಕಾಲೇಜು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀಟರ್ ವ್ಯಾಪ್ತಿಯಲ್ಲಿ 144ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ.

ಪರೀಕ್ಷಾ ಸಮಯದಲ್ಲಿ ಯಾವುದೇ ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ/ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರದ ಫಾಸಲೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಐದು ಅಥವಾ ಐದಕ್ಕಿಂತ ಹೆಚು ಜನರು ಮೇಲ್ಕಂಡ ನಿಷೇಧಿತ ವ್ಯಾಪ್ತಿಯಲ್ಲಿ ಸೇರುವುದನ್ನು ನಿಷೇಧಿಸಿದೆ. ಟೈಪಿಂಗ್, ಜೆರಾಕ್ಸ್, ಹಾಗೂ ಫ್ಯಾಕ್ಸ್ ಅಂಗಡಿಗಳು ಪರೀಕ್ಷಾ ದಿನಾಂಕ ಮತ್ತು ಸಮಯಗಳ ಅವಧಿಯಲ್ಲಿ ತೆರೆಯುವುದನ್ನು ಪ್ರತಿಬಂಧಿಸಿದೆ. ಮೊಬೈಲ್ ಬಳಕೆ ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಮುಖ್ಯದ್ವಾರದಲ್ಲಿ ಕಡ್ಡಾಯವಾಗಿ ಆರಕ್ಷಕ ಸಿಬ್ಬಂದಿಯನ್ನು ನಿಯೋಜಿಸಿ, ಅನಗತ್ಯ ವ್ಯಕ್ತಿಗಳ ಚಲನವಲನಗಳನ್ನು ನಿಯಂತ್ರಿಸಲು ಸಂಬಂಧಪಟ್ಟ ಠಾಣಾ ಮುಖ್ಯಸ್ಥರಿಗೆ ಸೂಕ್ತ ನಿದೇರ್ಶನಗಳನ್ನು ನೀಡುವುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...