ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ತೀವ್ರ ಆತಂಕವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಒಂದರಿಂದ 9ನೇ ತರಗತಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಕಡ್ಡಾಯವಾಗಿ ಪಾಸ್ ಮಾಡಲು ಚಿಂತನೆ ನಡೆಸಲಾಗಿದೆ.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡುವ ಬಗ್ಗೆ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಪರೀಕ್ಷೆ ನಡೆಸದೇ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ತೀರ್ಮಾನ ಕೈಗೊಂಡಿಲ್ಲ. ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಬಗ್ಗೆ ಇಲಾಖೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.