alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಯಶಸ್ಸಿನ ಬಗ್ಗೆ ಇಂದು ‘ಪರೀಕ್ಷಾ ಪೇ ಚರ್ಚಾ’ದಲ್ಲಿ ಮೋದಿ ಟಿಪ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಯಶಸ್ಸಿನ ಬಗ್ಗೆ ಇಂದು ‘ಪರೀಕ್ಷಾ ಪೇ ಚರ್ಚಾ’ದಲ್ಲಿ ಮೋದಿ ಟಿಪ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚಾ ಐದನೇ ಆವೃತ್ತಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದಕ್ಕೆ ಮೊದಲು ವಿದ್ಯಾರ್ಥಿಗಳಿಗೆ ವಿಡಿಯೋ ಬಿಡುಗಡೆ ಮಾಡಲಾಗಿದೆ. ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳುವುದು, ವಿದ್ಯಾರ್ಥಿ ಜೀವನದಲ್ಲಿ ತಂತ್ರಜ್ಞಾನದ ಪಾತ್ರ, ಪೋಷಕರ ಕನಸು ನನಸು ಮಾಡುವುದು, ಖಿನ್ನತೆಯ ವಿರುದ್ಧ ಹೋರಾಡುವುದು, ಬಿಡುವಿನ ವೇಳೆಯ ಸಮರ್ಪಕ ಬಳಕೆ ಮೊದಲಾದ ಮಾಹಿತಿ ಒಳಗೊಂಡ ವಿಡಿಯೋವನ್ನು ಮೋದಿ ಬಿಡುಗಡೆ ಮಾಡಿದ್ದಾರೆ.

ಇಂದು ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ, ಸಂವಾದಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ರಾಜ್ಯಗಳ ರಾಜ್ಯಪಾಲರೊಂದಿಗೆ ರಾಜಭವನದಿಂದ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಶಾಲೆಗಳಲ್ಲಿಯೂ ಕಾರ್ಯಕ್ರಮ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...