ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಸೆ. 26, 28 ಮತ್ತು 29 ರಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಷ್ಕರ, ಪ್ರತಿಭಟನೆ ನಡೆಯುತ್ತಿದ್ದು, ಸೆ. 26ರಂದು ಬೆಂಗಳೂರು ಬಂದ್, 28ರಂದು ಈದ್ ಮಿಲಾದ್, 29ರಂದು ಕರ್ನಾಟಕ ಬಂದ್ ಇರುವ ಹಿನ್ನೆಲೆಯಲ್ಲಿ ಸೆ. 26, 28 ಮತ್ತು 29 ರಂದು ನಡೆಯಬೇಕಿದ್ದ ಬಿಎ, ಬಿಕಾಂ, ಪ್ರಥಮ ಎಂಎ ಹಾಗೂ ಎಂಕಾಂ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಕ್ತ ವಿವಿ ವೆಬ್ಸೈಟ್ ನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ಕುಲಸಚಿವರು ಮಾಹಿತಿ ನೀಡಿದ್ದಾರೆ.