
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ವಿವಿ ಘಟಿಕೋತ್ಸವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಏಪ್ರಿಲ್ 6 ರಿಂದ ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಯಬೇಕಿದ್ದು, ಏಪ್ರಿಲ್ 14 ರಿಂದ ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.
ಶೀಘ್ರವೇ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯ ಪ್ರಕಟಿಸಲಿದೆ ಎಂದು ಹೇಳಲಾಗಿದೆ.