alex Certify ವಿದ್ಯಾರ್ಥಿಗಳೇ ಗಮನಿಸಿ: ರಂಜಾನ್ ರಜೆ ಹಿನ್ನಲೆ: ಸೋಮವಾರದ ಪರೀಕ್ಷೆಗಳು ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ರಂಜಾನ್ ರಜೆ ಹಿನ್ನಲೆ: ಸೋಮವಾರದ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ನಾಳೆ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮೈಸೂರು ವಿಶ್ವವಿದ್ಯಾಲಯ ಮುಂದೂಡಿದೆ. ನಾಳೆ ನಿಗದಿಯಾಗಿದ್ದ ಪರೀಕ್ಷೆಗಳು ಮೇ 7ರಂದು ನಡೆಯಲಿವೆ.

ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವರು ಸುತ್ತೋಲೆ ಪ್ರಕಟಿಸಿದ್ದಾರೆ. ಕಾನೂನು ಪದವಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

ಅದೇ ರೀತಿ ಕುವೆಂಪು ವಿಶ್ವವಿದ್ಯಾಲಯದ ಎಲ್ಲ ಸ್ನಾತಕ ಪದವಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ರಾಜ್ಯ ಸರ್ಕಾರ ಮೇ 2 ರಂದು ರಂಜಾನ್ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ನಿಗದಿಯಾಗಿದ್ದ ಕುವೆಂಪು ವಿವಿಯ ಎಲ್ಲ ಸ್ನಾತಕ ಪದವಿ ಪರೀಕ್ಷೆ ಮುಂದೂಡಲಾಗಿದೆ. ನಾಳೆ ನಡೆಯಬೇಕಿದ್ದ ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಕೆ. ನವೀನ್ ಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...