ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಸೇರಿದಂತೆ, ವಿವಿಧ ಇಲಾಖೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಭಾವ್ಯ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ. ಪೋಲಿಸ್ ಇಲಾಖೆಯ 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಸ್ಕ್ಯಾನ್ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.