ಧಾರವಾಡ: ಜೂನ್ 21 ರಿಂದ ಜುಲೈ 5 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಒಂದು ತಿಂಗಳ ಹಿಂದೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ವೇಳಾಪಟ್ಟಿಗೆ ಯಾರಿಂದಲೂ ಆಕ್ಷೇಪಣೆ ಬಂದಿಲ್ಲ. ಹೀಗಾಗಿ ಜೂನ್ 21 ರಿಂದ ಪರೀಕ್ಷೆ ನಡೆಸಲಾಗುವುದು. ಒಂದು ವಿಷಯಕ್ಕೆ ಒಂದು ದಿನ ವಿರಾಮ ಇರುವಂತೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.