
ಬೆಂಗಳೂರು: ಸರ್ಕಾರದ ಆದೇಶಕ್ಕೆ ಮೊದಲೇ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆಯ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ರಾಜ್ಯದ ಅನೇಕ ವಿಶ್ವವಿದ್ಯಾಲಯಗಳಿಂದ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಗುಲ್ಬರ್ಗ ವಿವಿಯಲ್ಲಿ ಜುಲೈ 15 ರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
ಜುಲೈ 19 ರಿಂದ ವಿಜಯನಗರ ಕೃಷ್ಣದೇವರಾಯ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ನಡೆಯಲಿದೆ.
ಜುಲೈ 20 ರಿಂದ ಅಕ್ಕಮಹಾದೇವಿ ಮಹಿಳಾ ವಿವಿಯ ಪರೀಕ್ಷೆ ನಡೆಯಲಿದೆ. ಆ. 2 ರಿಂದ ಕರ್ನಾಟಕ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.