ಬೆಳ್ಳುಳ್ಳಿ ಆರೋಗ್ಯಕ್ಕೆ ಉತ್ತಮ ಎಂದು ಹೇಳುತ್ತಾರೆ. ಆದರೆ ಅತಿಯಾಗಿ ಸೇವಿಸಿದರೆ ಅಮೃತವು ವಿಷವಾಗುತ್ತದೆ ಎಂಬಂತೆ ಬೆಳ್ಳುಳ್ಳಿಯನ್ನು ಅತಿಯಾಗಿ ಸೇವಿಸಿದರೆ ಕೆಲವು ಅಡ್ಡಪರಿಣಾಮಗಳು ಉಂಟಾಗುತ್ತದೆ.
* ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಅಲ್ಲಿಸಿನ್ ಅಂಶದಿಂದ ಪಿತ್ತಜನಕಾಂಗಕ್ಕೆ ನಂಜುಂಟಾಗಬಹುದು.
* ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅದರಲ್ಲಿರುವ ಸಲ್ಫರ್ ಅಂಶಗಳಿಂದ ಅತಿಸಾರ ಅಥವಾ ಭೇದಿ ಉಂಟಾಗಬಹುದು.
* ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಎದೆಯುರಿ, ವಾಕರಿಕೆ ಹಾಗೂ ವಾಂತಿ ಉಂಟಾಗಬಹುದು.
* ಬೆಳ್ಳುಳ್ಳಿಯನ್ನು ಹೆಚ್ಚಾಗಿ ತಿಂದರೆ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು.