alex Certify ಬೆಳ್ಳುಳ್ಳಿಯ ಅತಿಯಾದ ಸೇವನೆ ಉಂಟು ಮಾಡುತ್ತೆ ಈ ಅಡ್ಡ ಪರಿಣಾಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳುಳ್ಳಿಯ ಅತಿಯಾದ ಸೇವನೆ ಉಂಟು ಮಾಡುತ್ತೆ ಈ ಅಡ್ಡ ಪರಿಣಾಮ

ಬೆಳ್ಳುಳ್ಳಿ ಆರೋಗ್ಯಕ್ಕೆ ಉತ್ತಮ ಎಂದು ಹೇಳುತ್ತಾರೆ. ಆದರೆ ಅತಿಯಾಗಿ ಸೇವಿಸಿದರೆ ಅಮೃತವು ವಿಷವಾಗುತ್ತದೆ ಎಂಬಂತೆ ಬೆಳ್ಳುಳ್ಳಿಯನ್ನು ಅತಿಯಾಗಿ ಸೇವಿಸಿದರೆ ಕೆಲವು ಅಡ್ಡಪರಿಣಾಮಗಳು ಉಂಟಾಗುತ್ತದೆ.

* ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಅಲ್ಲಿಸಿನ್ ಅಂಶದಿಂದ ಪಿತ್ತಜನಕಾಂಗಕ್ಕೆ ನಂಜುಂಟಾಗಬಹುದು.

* ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅದರಲ್ಲಿರುವ ಸಲ್ಫರ್‌ ಅಂಶಗಳಿಂದ ಅತಿಸಾರ ಅಥವಾ ಭೇದಿ ಉಂಟಾಗಬಹುದು.

* ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಎದೆಯುರಿ, ವಾಕರಿಕೆ ಹಾಗೂ ವಾಂತಿ ಉಂಟಾಗಬಹುದು.

* ಬೆಳ್ಳುಳ್ಳಿಯನ್ನು ಹೆಚ್ಚಾಗಿ ತಿಂದರೆ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು.

  * ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಕಣ್ಣಿನ ಐರಿಸ್ ಹಾಗೂ ಕಾರ್ನಿಯಾ ಮಧ್ಯದ ಖಾಲಿ ಜಾಗದಲ್ಲಿ ರಕ್ತಸ್ರಾವ ಉಂಟಾಗಬಹುದು. ಇದರಿಂದ ಕಣ್ಣು ಕಳೆದುಕೊಳ್ಳುವ ಸಾಧ್ಯತೆಯೂ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...