ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆಗೆ ಮುಂದಾಗಿದ್ದು, ನವೆಂಬರ್ 20ರಂದು ಮದ್ಯದಂಗಡಿ ಬಂದ್ ಗೆ ಕರೆ ನೀಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಮದ್ಯದಂಗಡಿ ಮಾಲೀಕರು ತಿರುಗಿ ಬಿದ್ದಿದ್ದಾರೆ. ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ, ಪ್ರಮೋಷನ್ ಗಾಗಿ ಹಣ ಸಂಗ್ರಹ ಮಾಡುತ್ತಿದ್ದಾರೆ. ಇಲಾಖೆ ಸಚಿವರ ಬದಲಿಸಬೇಕು. ಹಾಗೂ ಭ್ರಷ್ಟಾಚಾರ ತಡೆಗಟ್ಟುವತೆ ಆಗ್ರಹಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಗೆ ಕರೆ ನೀಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ. ಸಚಿವರನ್ನು ಬದಲಿಸುವಂತೆ ಒತ್ತಾಯಿಸಿ ಮದ್ಯದಂಗಡಿ ಮಾಲೀಕರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.