
ಹಾವೇರಿ: ರಾಜ್ಯದಲ್ಲಿ ಹೊಸ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಹೊಸದಾಗಿ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡುವ ಬಗ್ಗೆ ಸರ್ಕಾರ ಯೋಜಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿಲ್ಲ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಅನುಮತಿ ಪಡೆದು ಹೊಸ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಲೈಸೆನ್ಸ್ ನವೀಕರಣಕ್ಕೆ ಹಣ ಪಡೆದಿಲ್ಲ. ನಾನು ಅಬಕಾರಿ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಮಾಡಿಲ್ಲ. ಅಧಿಕಾರಿಗಳ ವರ್ಗಾವಣೆಗೆ ಕೋಟ್ಯಂತರ ರೂಪಾಯಿ ಪಡೆಯಲಾಗಿದೆ ಎನ್ನುವ ಆರೋಪ ಸತ್ಯಕ್ಕೆ ದೂರವಾದ ಸಂಗತಿ ಎಂದು ಹೇಳಿದ್ದಾರೆ.