ಬೆಂಗಳೂರು: ಅಬಕಾರಿ ಇಲಾಖೆ ಸಚಿವರನ್ನು ಬದಲಿಸುವಂತೆ ಒತ್ತಾಯಿಸಿ ಮದ್ಯದಂಗಡಿ ಮಾಲೀಕರು ಒತ್ತಾಯಿಸಿದ್ದು, ಬೇಡಿಕೆಗೆ ಒಪ್ಪದಿದ್ದಲ್ಲಿ ನವೆಂಬರ್ 20ರಿಂದ ಮದ್ಯದಂಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದೇ ವಿಚಾರವಾಗಿ ವಿಪಕ್ಷ ಬಿಜೆಪಿ, ಸರ್ಕಾರದ ವಿರುದ್ಧ ಕಿಡಿಕಾರಿದೆ.
ಒಂದು ಕಡೆ ಬ್ರಹ್ಮಾಂಡ ಭ್ರಷ್ಟಾಚಾರದ ಕೂಪದಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದಿದ್ದರೆ, ಮತ್ತೊಂದಡೆ ಹಲವು ಇಲಾಖೆಗಳು ಭ್ರಷ್ಟಾಚಾರದ ಹಾಟ್ಸ್ಪಾಟ್ಗಳಾಗಿ ಬದಲಾಗಿವೆ. ಅಧಿಕಾರಿಗಳ ವರ್ಗಾವಣೆ, ನೇಮಕಾತಿ, ಲೈಸೆನ್ಸ್ ಟ್ರಾನ್ಸಫರ್ ದಂಧೆ, ಸನ್ನದುದಾರರ ಮೇಲೆ ದೌರ್ಜನ್ಯ ಸೇರಿದಂತೆ ಹಲವು ಸಮಸ್ಯೆಗಳಲ್ಲಿ ಸಿಲುಕಿ ಅಬಕಾರಿ ಇಲಾಖೆ ಗಬ್ಬೆದ್ದು ನಾರುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
ಅಸಮರ್ಥ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಅವರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ, ಮದ್ಯದಂಗಡಿ ಮಾಲೀಕರು ಪ್ರತಿಭಟನೆ ನಡೆಸಿ ಭ್ರಷ್ಟ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ ಎಂದು ಟಾಂಗ್ ನೀಡಿದೆ.