ನವದೆಹಲಿ : ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ (ಮಾರ್ಚ್ 21) ದೆಹಲಿ ಹೈಕೋರ್ಟ್ ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ .
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಬಲವಂತದ ಕ್ರಮಗಳಿಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ.
ಇಂದು ನ್ಯಾಯಾಲಯವು ವಿಚಾರಣೆ ನಡೆಸಲಿರುವ ತಮ್ಮ ಇತ್ತೀಚಿನ ಮನವಿಯಲ್ಲಿ, ಎಎಪಿ ನಾಯಕ ತನಿಖೆಯ ಮಧ್ಯೆ ಜಾರಿ ನಿರ್ದೇಶನಾಲಯ (ಇಡಿ) ಯೊಂದಿಗೆ ಸಹಕರಿಸಲು ಸಿದ್ಧನಿದ್ದೇನೆ ಆದರೆ ಫೆಡರಲ್ ಏಜೆನ್ಸಿ ಅವರನ್ನು ಬಂಧಿಸುವುದನ್ನು ತಡೆಯಬೇಕು ಎಂದು ಹೇಳಿದರು.ಹಲವಾರು ಸಂದರ್ಭಗಳಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್ ತಪ್ಪಿಸಿಕೊಂಡಿದ್ದಕ್ಕಾಗಿ ದೆಹಲಿ ಹೈಕೋರ್ಟ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಇದಾದ ನಂತರ ಈ ಬೆಳವಣಿಗೆ ನಡೆದಿದೆ.