alex Certify ಜ.2 ರಿಂದ ಬಳ್ಳಾರಿಯಲ್ಲಿ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ.2 ರಿಂದ ಬಳ್ಳಾರಿಯಲ್ಲಿ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಬಳ್ಳಾರಿ : ನಗರದಲ್ಲಿ ಹೊಸ ವರ್ಷದ ಹಾಗೂ ಮಕರ ಸಂಕ್ರಾತಿ ಹಬ್ಬದ ಪ್ರಯುಕ್ತ ಜನವರಿ 2 ರಿಂದ ಜನವರಿ 15 ರ ವರೆಗೆ 14 ದಿನಗಳ ಕಾಲ ರಾಜ್ಯ ಮಟ್ಟದ ವಿಶೇಷ ಕೈಮಗ್ಗ ಮೇಳ ವಸ್ತ್ರಸಿರಿ-2024 `ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ’ ಹಮ್ಮಿಕೊಳ್ಳಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉತ್ತರ ವಲಯ ಜಂಟಿ ನಿರ್ದೇಶಕ ವಿರೇಶ್ ದವಳೆ ಅವರು ಹೇಳಿದರು.

ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರರ ಸಂಘಗಳಿಗೆ ಉತ್ತೇಜನ ನೀಡಲು ಮತ್ತು ಪ್ರೋತ್ಸಾಹಿಸಲು, ಜಿಲ್ಲಾ ಪಂಚಾಯತ್ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆಯ ಆಶ್ರಯದಲ್ಲಿ ನಗರದ ಗಡಿಗಿ ಚೆನ್ನಪ್ಪ ವೃತ್ತದ ಬಳಿಯ ಗಾಂಧಿ ಭವನದಲ್ಲಿ ಜ.2ರಿಂದ ಜ.15ರವರೆಗೆ 14 ದಿನಗಳ ಕಾಲ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜ.2ರಂದು ಸಂಜೆ 04 ಗಂಟೆಗೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಅಂದಿನಿಂದ 14 ದಿನಗಳ ಕಾಲ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ ಎಂದರು.ಈ ಮೇಳದಲ್ಲಿ ರಾಜ್ಯದ ಹಾಗೂ ಹೊರ ರಾಜ್ಯಗಳಿಂದ ನೇಕಾರ ಸಂಘಗಳು ಭಾಗವಹಿಸಲಿದ್ದು, ಉತ್ತಮ ವಿವಿಧ ನಮೂನೆಯ ಬಣ್ಣ ಬಣ್ಣದ ಹತ್ತಿ ಮತ್ತು ರೇಷ್ಮೆ ಸೀರೆ, ಟವೆಲ್, ಗುಡಾರ, ಲುಂಗಿ, ಬೆಡ್ಶೀಟ್, ಬೆಡ್ಸ್ಪ್ರೇಡ್, ಮೊಳಕಾಲ್ಮೂರು ಸೀರೆ, ಗದ್ವಾಲ್ ಸೀರೆ, ಗುಳೆದ್ಗುಡ್ಡ ಕಣ, ಕೈವಸ್ತ್ರ, ಕಂಬಳಿ, ಉಣ್ಣೆ ರಗ್ಗು, ಡೋರ್ ಮ್ಯಾಟ್, ವಾಲ್ ಹ್ಯಾಂಗಿಗ್ಸ್, ಡ್ರೆಸ್ ಮೆಟಿರಿಯಲ್, ಖಾದಿ ಬಟ್ಟೆಗಳು, ಸಂಡೂರಿನ ಲಮಾಣಿ ಕಸೂತಿ ಉತ್ಪನ್ನಗಳು ಲಭ್ಯವಿರಲಿವೆ.

ಕೈಮಗ್ಗ ನೇಕಾರರಿಂದ ನೇರವಾಗಿ ಗ್ರಾಹಕರಿಗೆ ಶೇ.20 ರಷ್ಟು ರಿಯಾಯಿತಿ ದರದಲ್ಲಿ ಸಿಗಲಿವೆ. ಸಾರ್ವಜನಿಕರು ಮತ್ತು ನಗರವಾಸಿಗಳು `ಕೈ ಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ’ದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.ಈ ಸಂದರ್ಭದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರಾದ ವಿಠಲ ರಾಜ್ ಹಾಗೂ ಸಹಾಯಕ ನಿರ್ದೇಶಕರಾದ ಮಹಾಂತೇಶ್ ಕಂಚಿನ ಮಠ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...