ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದಲೇ ಟೋಲ್ ಸಂಗ್ರಹಿಸುವುದಿಲ್ಲ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.
ಮೈಸೂರು ಮತ್ತು ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ ಸಿಂಹ ಫೇಸ್ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್.ಹೆಚ್.ಎ.ಐ. ನಾಳೆಯಿಂದಲೇ ಮೊದಲ ಹಂತದ ಟೋಲ್ ಸಂಗ್ರಹಕ್ಕೆ ಮುಂದಾಗಿತ್ತು. ಸೇವಾ ರಸ್ತೆಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮುಂದೂಡಲಾಗಿದೆ ಎಂದು ಸಂಸದರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾರ್ಚ್ 11 ರಂದು ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಆದರೆ, ಉದ್ಘಾಟನೆಗೆ ಮೊದಲೇ ನಾಳೆಯಿಂದಲೇ ಟೋಲ್ ಶುಲ್ಕ ವಿಧಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿತ್ತು. ಟೋಲ್ ದರ ಕುರಿತಂತೆ ಆದೇಶ ಹೊರಡಿಸಲಾಗಿದ್ದು, ಇದು ಬಲು ದುಬಾರಿಯಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು.
https://m.facebook.com/story.php?story_fbid=pfbid02sgc7s17iJXCUbCoLtyfaaBg9iEfivWfPeV12qEi1iA4q6Skvk28fi5KucFjiTGNfl&id=100044521360593&mibextid=Nif5oz