ಬೆಂಗಳೂರು: ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವ ಕ್ರಮವನ್ನು ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ.
ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಿದ್ಧತೆ ಕೈಗೊಂಡಿದ್ದು, ಗುರುವಾರ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.
ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ತಂದು ನಿಗದಿಪಡಿಸಿದ ವೇಳಾಪಟ್ಟಿಯಂತೆ 5, 8, 9 ಮತ್ತು 11ನೇ ತರಗತಿಗಳಿಗೆ ಪರೀಕ್ಷೆ ನಡೆಸುವ ಉದ್ದೇಶ ಹೊಂದಿದೆ. ಪರೀಕ್ಷಾ ದಿನಾಂಕ ಸಮೀಪದಲ್ಲಿ ಇರುವುದರಿಂದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಪರೀಕ್ಷೆ ನಡೆಸಲು ಅವಕಾಶ ನೀಡುವಂತೆ ಗುರುವಾರವೇ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.