ವಿಧಾನಸಭಾ ಚುನಾವಣೆಗಳಲ್ಲಿ ಪದೇ ಪದೇ ಹಿನ್ನಡೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಹರಿಯಾಣದಲ್ಲಿ ಶಾಸಕ ಕುಲದೀಪ್ ಬಿಷ್ಣೋಯಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕುಲದೀಪ್ ಬಿಷ್ಣೋಯಿ ನಾಳೆ ಆಡಳಿತರೂಢ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಮತ್ತಷ್ಟು ಶಾಸಕರು ಇವರ ಹಾದಿಯನ್ನೇ ಅನುಸರಿಸಲಿದ್ದಾರೆ ಎಂಬ ಮಾತುಗಳು ಹರಿಯಾಣ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.