alex Certify BIG NEWS: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ನಾಲ್ವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ನಾಲ್ವರು ದುರ್ಮರಣ

ಭೋಪಾಲ್: ಪಟಾಕಿ ತಯಾರಿಕಾ ಕಾರ್ಖಾನೆಯ ಗೋಡೌನ್ ನಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಬನ್ ಮೋರ್ ನಗರದಲ್ಲಿ ನಡೆದಿದೆ.

ದೀಪಾವಳಿ ಹಿನ್ನೆಲೆಯಲ್ಲಿ ಗೋಡೌನ್ ನಲ್ಲಿ ಪಟಾಕಿಗಳನ್ನು ಸಂಗ್ರಹಿಸಿ ಇರಿಸಲಾಗಿತ್ತು. ಏಕಾಏಕಿ ಸ್ಫೋಟ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗೋಡೌನ್ ಅವಶೆಷಗಳಡಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ರಕ್ಷಣಾ ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಪೊಲೀಸ್ ಮಹಾನಿರೀಕ್ಷಕ ರಾಜೇಶ್ ಚಾವ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...