ತುಮಕೂರು : ಬೆಂಗಳೂರಿನ ‘ರಾಮೇಶ್ವರಂ ಕೆಫೆ’ಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 9 ಮಂದಿ ಗಾಯಗೊಂಡಿದ್ದಾರೆ.
ಈ ಬಗ್ಗೆ ಕುಣಿಗಲ್ ನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದು, ಬೆಂಗಳೂರಿನ ‘ರಾಮೇಶ್ವರಂ ಕಫೆ’ಯಲ್ಲಿ ಇಂದು ಸ್ಪೋಟ ಸಂಭವಿಸಿದೆ. ಈ ಸ್ಪೋಟದಲ್ಲಿ 9 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಏನು ಸ್ಪೋಟವಾಗಿದೆ ಎಂಬುದು ಗೊತ್ತಿಲ್ಲ, 9 ಜನರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಭೀಕರ ಸ್ಫೋಟ ಸಂಭವಿಸಿದ್ದು, ಅನುಮಾನಾಸ್ಪದ ಬ್ಯಾಗ್ ನಿಂದಲೇ ಸ್ಪೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಪೋಟದ ಶಬ್ದಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.