
ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಎದುರು ಸ್ಪೋಟ ಸಂಭವಿಸಿದೆ. ಐಇಡಿ ಸ್ಫೋಟಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸ್ಫೋಟದಿಂದಾಗಿ ಐದರಿಂದ ಆರು ವಾಹನಗಳು ಜಖಂಗೊಂಡಿವೆ.
ರಾಷ್ಟ್ರ ರಾಜಧಾನಿ ದೆಹಲಿಯ ಹೃದಯಭಾಗದಲ್ಲಿರುವ ಔರಂಗಜೇಬ್ ರಸ್ತೆಯಲ್ಲಿ ಸ್ಪೋಟ ಸಂಭವಿಸಿದೆ. ಭಾರಿ ಸ್ಫೋಟದಿಂದಾಗಿ ಅನೇಕ ವಾಹನಗಳಿಗೆ ವರದಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.