ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.