alex Certify ಗಮನಿಸಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 20 ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ವೆಬ್ ಸೈಟ್ http://dom.karnataka.gov.in ಗೆ ಹಾಗೂ ಕಚೇರಿ ದೂ.08392-200125,224, ಸಹಾಯವಾಣಿ ಸಂಖ್ಯೆ ಮೊ.8277799990, ಮೊ.8746818180 ಮತ್ತು ಜಿಲ್ಲೆಯ ಎಲ್ಲಾ ತಾಲೂಕು ಅಲ್ಪಸಂಖ್ಯಾತರ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪಿಎಲ್ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಹಾಗೂ ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (Para Legal Volunteers) ಅಂತ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುತ್ತದೆ.ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದುಕೊಂಡು ಭರ್ತಿಮಾಡಿ ಜುಲೈ 21 ಸಂಜೆ 5.30 ರೊಳಗಾಗಿ ಖುದ್ದಾಗಿ ಇದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...