ಬೆಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ‘ಆರೋಗ್ಯ ಸಂಜೀವಿನಿʼ ಯೋಜನೆ ವಿಸ್ತರಣೆ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ʼಆರೋಗ್ಯ ಸಂಜೀವಿನಿʼ ಯೋಜನೆ ವಿಸ್ತರಿಸುವ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಮಂಡಲ ಕಲಾಪದಲ್ಲಿ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಕ್ಕಳಿಗೆ ಮೊಟ್ಟೆ ಮತ್ತು ಪೂರಕ ಪೌಷ್ಠಿಕ ಆಹಾರ
ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸುಮಾರು 60 ಲಕ್ಷ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟೆಯನ್ನು ಹಾಗೂ ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ವಿತರಿಸಲಾಗುತ್ತಿದೆ. ಅಜೀಂ ಪ್ರೇಮ್ಜಿ ಫೌಂಡೇಷನ್ ನವರು ವಾರದಲ್ಲಿ ಉಳಿದ 4 ದಿನ ಮಕ್ಕಳಿಗೆ ಮೊಟ್ಟೆ ಮತ್ತು ಪೂರಕ ಪೌಷ್ಠಿಕ ಆಹಾರ ನೀಡಿವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆ ಕೈಜೋಡಿಸಿದ್ದಾರೆ. ಅವರ ಈ ಕಾರ್ಯಕ್ಕೆ ಹೃದಯ ತುಂಬಿದ ಧನ್ಯವಾದಗಳು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೈಹಿಕವಾಗಿ ಸದೃಢರಾಗಲಿ ಎಂದು ಈ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು. ಸರ್ಕಾರ ನಿಮ್ಮ ಜೊತೆಯಲ್ಲಿ ಸದಾ ಇರುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.