ನವದೆಹಲಿ: ಉಚಿತ ಪಡಿತರ ಯೋಜನೆ ವಿಸ್ತರಣೆಯಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ, ಹಬ್ಬದ ಸಮಯದಲ್ಲಿ ಅನುಕೂಲವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರವನ್ನು ಪಡೆಯುತ್ತಿರುವ ಯೋಜನೆಯನ್ನು ವಿಸ್ತರಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರವು ಹಬ್ಬದ ಋತುವಿನಲ್ಲಿ ಅವರಿಗೆ ಬೆಂಬಲವನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.
ನವದೆಹಲಿ, ಅಹಮದಾಬಾದ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಕ್ಯಾಬಿನೆಟ್ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಭಾರತದ ಮೂಲಸೌಕರ್ಯ ಉನ್ನತ ದರ್ಜೆಗೇರಲಿದೆ. ಈ ನಿಲ್ದಾಣಗಳನ್ನು ಆಧುನೀಕರಿಸಲಾಗುವುದು ಎಂದು ತಿಳಿಸಿದ್ದಾರೆ.
ದೇಶಾದ್ಯಂತ ಮೊದಲ ಕೋವಿಡ್-19 ಲಾಕ್ ಡೌನ್ ಜಾರಿಗೊಳಿಸಿದ ನಂತರ ಮಾರ್ಚ್ 2020 ರಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಘೋಷಿಸಲಾಯಿತು. ಸೆ. 30 ರವರೆಗೆ ಯೋಜನೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಯೋಜನೆ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.