
ಬೆಂಗಳೂರು: 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೂ ರಾಜ್ಯ ವೇತನ ಸೌಲಭ್ಯಗಳನ್ನು ವಿಸ್ತರಿಸಲಾಗಿದೆ.
ಸರ್ಕಾರದ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಆದೇಶಿಸಿದೆ. ಅನ್ವಯಿಸುವ ಬದಲಾವಣೆಯೊಂದಿಗೆ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲು ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶಿಸಲಾಗಿದೆ.
ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ವಿಸ್ತ್ರತವಾದ ಆದೇಶವನ್ನು ಹೊರಡಿಸಿದ್ದು, ಸದರಿ ಆದೇಶದ ಕಂಡಿಕೆ 11.1ರಲ್ಲಿ “ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ರಾಜ್ಯ ಸರ್ಕಾರದಿಂದ ಸಹಾಯಾನುದಾನ ಪಡೆಯುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿನ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಹೊರಡಿಸುತ್ತವೆ ಎಂದು ಹೇಳಲಾಗಿದೆ.

