ಬೆಂಗಳೂರು : ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ‘ಆಶಾಕಿರಣ’ ಯೋಜನೆ ಜಾರಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರದ ಮಹತ್ವಾಕಾಂಕ್ಷಿ”ಆಶಾಕಿರಣ” ಯೋಜನೆ ರಾಜ್ಯವ್ಯಾಪಿ ಜಾರಿಯಾಗಿದೆ. ಜನರಲ್ಲಿ ಕಣ್ಣಿನ ಆರೈಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಆಶಾಕಿರಣ ಯೋಜನೆ ಈಗಾಗಲೇ ಕಾರ್ಯೋನ್ಮುಖವಾಗಿದೆ.”ಆಶಾಕಿರಣ – ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ”ರಾಜ್ಯದ ಪ್ರತಿಯೊಬ್ಬರ ಕಣ್ಣಿನ ಕಾಳಜಿ ನಮ್ಮ ಆದ್ಯತೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಉಚಿತ ಕಣ್ಣಿನ ಚಿಕಿತ್ಸೆ ನೀಡುವ ರಾಜ್ಯ ಸರ್ಕಾರದ ಮಹತ್ವದ ಆಶಾಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಹಾವೇರಿಯಲ್ಲಿ ಚಾಲನೆ ನೀಡಿದರು.ಹಾವೇರಿ ನಗರದ ಕೊಳ್ಳಿ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು.
ಮೊದಲ ಹಂತದಲ್ಲಿ ನಾಲ್ಕು ಜಿಲ್ಲೆಗಳ 2.45 ಲಕ್ಷ ಮಂದಿಗೆ ಕನ್ನಡಕ ವಿತರಿಸುವ ಕಾರ್ಯಕ್ಕೆ ಹಸಿರುನಿಶಾನೆ ತೋರಿದರು.ಈ ಯೋಜನೆಯಲ್ಲಿ ಮೊದಲ ಹಂತದಲ್ಲಿ ಹಾವೇರಿ, ಕಲಬುರಗಿ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳ ಜನ ರಿಗೆ ಕನ್ನಡಕ ವಿತರಣೆಗೆ ಚಾಲನೆ ಸಿಕ್ಕಿದೆ. 2ನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಹಾವೇರಿಯಲ್ಲಿ ಪುಟ್ಟ ಮಗುವಿಗೆ ಉಚಿತ ಕನ್ನಡಕವನ್ನು ತೊಡಿಸುವ ಮೂಲಕ ‘ಆಶಾಕಿರಣ-ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಯೋಜನೆಗೆ ಭಾನುವಾರ ಸಿದ್ದರಾಮಯ್ಯ ಚಾಲನೆ ನೀಡಿದರು. ರಾಜ್ಯ ಸರ್ಕಾರದಿಂದ ಮನೆ ಮನೆಗೆ ತೆರಳಿ ಜನರ ಕಣ್ಣಿನತಪಾಸಣೆ ನಡೆಸಿ ಕಣ್ಣಿನ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಶಸ್ತ್ರ ಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣೆ ಮಾಡಲಿದೆ.