ಫೇಸ್ ಬುಕ್ ಲೈವ್ ನಲ್ಲಿ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ನಟ ಉಪೇಂದ್ರ ಅವರ ವಿರುದ್ಧ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ. ಆಕ್ಷೇಪಾರ್ಹ ಪದ ಬಳಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.
ಫೇಸ್ಬುಕ್ ಲೈವ್ ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಉಪೇಂದ್ರ ಬಳಿಕ ವಿಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದರು.
ಆಕ್ರೋಶ ಮುಂದುವರೆದ ಹಿನ್ನಲೆಯಲ್ಲಿ ಮತ್ತೊಮ್ಮೆ ಸ್ಪಷ್ಟನೆ ನೀಡಿ ಯಾಕೆ ಇಷ್ಟೊಂದು ದ್ವೇಷ ಎಂದು ಪ್ರಶ್ನಿಸಿದ್ದಾರೆ.
‘ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ.
50 ವರ್ಷಗಳ ಹಿಂದೆ ನನ್ನ ಬಾಲ್ಯ, ನಾನು ಎಂತಹ ಪರಿಸರದಲ್ಲಿ ಬೆಳೆದೆ, ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ…? ಅದಕ್ಕೆ ಕಾರಣವಾದರೂ ಏನು…? ಅದರಿಂದ ನನಗೆ ಸಿಗುವ ಲಾಭವಾದರೂ ಏನು…? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ…? ಯಾಕೆ ಇಷ್ಟೊಂದು ಧ್ವೇಷ…? ಎಂದು ಪ್ರಶ್ನಿಸಿದ್ದಾರೆ.
https://m.facebook.com/story.php?story_fbid=pfbid0nSYwP6JYyLAa7HQnZwcdWehAR547HewVC7avL6tXrFQEnCBv6GndMw8SRTxEUXz9l&id=100044461115286&sfnsn=wiwspwa&mibextid=6aamW6