ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಫೇಸ್ಬುಕ್, ಎಕ್ಸ್ ಜಾಲತಾಣ ಖಾತೆಗಳನ್ನು ಹ್ಯಾಕ್ ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಡಿಯೋ ಪೋಸ್ಟ್ ಮಾಡಲಾಗಿದೆ.
ಈ ಬಗ್ಗೆ ಗಮನಕ್ಕೆ ಬಂದ ಕೂಡಲೇ ಕ್ರಮ ಕೈಗೊಂಡಿರುವ ಹರಿಪ್ರಸಾದ್ ಪೊಲೀಸರಿಗೆ ದೂರು ನೀಡಿದ್ದಾರೆ. ಕಿಡಿಗೇಡಿಗಳು ನನ್ನ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿ ದುರ್ಬಳಕೆ ಮಾಡಲು ಯತ್ನಿಸಿದಕ್ಕೆ ಈಗಾಗಲೇ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿಗಳ ವಿರುದ್ಧ ವಿಡಿಯೋ ಪೋಸ್ಟ್ ಮಾಡಿದ್ದರ ಬಗ್ಗೆ ದೂರು ದಾಖಲಿಸುವುದಾಗಿ ತಿಳಿಸಿದ್ದಾರೆ.