
ರಾಮನಗರ: ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿನ ಶೃಂಗಾರ ಗೌರಿ ಮಂದಿರದಲ್ಲಿ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದ ತೀರ್ಪಿನ ಬಗ್ಗೆ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವಕೀಲನನ್ನು ಬಂಧಿಸಲಾಗಿದೆ.
ವಕೀಲ ಚಾನ್ ಪಾಷ ಅವರನ್ನು ಪೊಲೀಸರು ಮಂಗಳವಾರ ಬೆಳಿಗ್ಗೆ ಬಂಧಿಸಿದ್ದಾರೆ. ಬಳಿಕ ಅವರನ್ನು ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಬಿಡುಗಡೆ ಮಾಡಿದ್ದಾರೆ. ಆಕ್ಷೇಪಾರ್ಹ ಪೋಸ್ಟ್ ಹಾಕಿದ ಬಗ್ಗೆ ಬಿಜೆಪಿ ಮುಖಂಡ ಪಿ. ಶಿವಾನಂದ ದೂರು ಸಲ್ಲಿಸಿದ್ದು, ಫೆಬ್ರವರಿ 3ರಂದು ಚಾನ್ ಪಾಷ ವಿರುದ್ಧ ಎಫ್ಐಆರ್ ದಾಖಲಾಗಿತ್ತು.