![](https://kannadadunia.com/wp-content/uploads/2021/03/arrest_jail_court-770x433-1.jpg)
ಶಿವಮೊಗ್ಗ: ಯುವತಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡಿದ ವ್ಯಕ್ತಿಯನ್ನು ಶಿವಮೊಗ್ಗದ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಹಿರೇಮಗಳೂರು ಗ್ರಾಮದ ವೇಣುಗೋಪಾಲ್ ಬಂಧಿತ ವ್ಯಕ್ತಿ. ಈತ ಯುವತಿಯ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡಿ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾಗಿ ಯುವತಿ ದೂರು ನೀಡಿದ್ದರು. ಸಿಇಎನ್ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 4 ಮೊಬೈಲ್ ವಶಕ್ಕೆ ಪಡೆಯಲಾಗಿದೆ.