
ವಾಷಿಂಗ್ಟನ್: ಅಮೇರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ನಿಷೇಧಿಸಿದ್ದು, ಇದಾದ ನಂತರದಲ್ಲಿ ಮತ್ತೊಂದು ಶಾಕ್ ನೀಡಲಾಗಿದೆ. ಅವರ ಫೇಸ್ಬುಕ್ ಖಾತೆಯನ್ನು ಎರಡು ವರ್ಷ ಅಮಾನತು ಮಾಡಲಾಗಿದೆ.
ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಡೊನಾಲ್ಡ್ ಟ್ರಂಪ್ ಪ್ರಚೋದನಾತ್ಮಕ ಪೋಸ್ಟ್ ಗಳನ್ನು ಹಾಕಿದ್ದರು. ಈ ಹಿನ್ನೆಲೆಯಲ್ಲಿ 2023 ರ ವರೆಗೆ ಅವರ ಫೇಸ್ ಬುಕ್ ಖಾತೆಯನ್ನು ಅಮಾನತು ಮಾಡಲಾಗಿದೆ. ನಿಯಮಾವಳಿ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ನಿರ್ಬಂಧಿಸಲಾಗಿದೆ.