ನವದೆಹಲಿ: ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ಮಲಯಾಳಂ ನಿಷೇಧಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಂದ ಹಾಗೆ, ಕೇರಳದ ನರ್ಸ್ ಗಳು ತಮ್ಮ ಸೇವೆಗೆ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ.
ದೆಹಲಿಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನರ್ಸಿಂಗ್ ಸಿಬ್ಬಂದಿ ತಮ್ಮ ನಡುವಿನ ಸಂಭಾಷಣೆ ಸಂದರ್ಭದಲ್ಲಿ ಮಲಯಾಳಂ ಭಾಷೆ ಬಳಸದೆ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ದೆಹಲಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಕೇರಳದ ನರ್ಸ್ ಗಳ ಸಂಖ್ಯೆ ಹೆಚ್ಚಾಗಿದೆ. ಅವರ ನಡುವೆ ಸಹಜವಾಗಿಯೇ ಮಲಯಾಳಂನಲ್ಲಿ ಮಾತನಾಡಿಕೊಳ್ಳುವುದು ಸಾಮಾನ್ಯವಾಗಿದೆ. ಸರ್ಕಾರಿ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಆಸ್ಪತ್ರೆ ಆವರಣದಲ್ಲಿ ಮಲಯಾಳಂ ಭಾಷೆ ಮಾತನಾಡದಂತೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ತಮ್ಮ ಆದೇಶವನ್ನು ವಾಪಸ್ ಪಡೆದಿದ್ದಾರೆ.
ಕೇರಳ ನರ್ಸ್ ಗಳು ಮಲಯಾಳಂ ನಿಷೇಧ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಂತರ ದೆಹಲಿ ವೈದ್ಯಕೀಯ ನಿರ್ದೇಶಕ ಡಾ. ಅನಿಲ್ ಅಗರವಾಲ್ ಕ್ರಮ ಕೈಗೊಂಡಿದ್ದಾರೆ. ಇಂತಹುದೊಂದು ಆದೇಶ ಹೊರಡಿಸುವುದು ಅಕ್ರಮವಾಗಿದ್ದು, ಅದನ್ನು ವಾಪಸ್ ಪಡೆಯಲಾಗಿದೆ. ಪ್ರಕರಣದ ತನಿಖೆಗೂ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.