alex Certify FACT CHECK : ‘ಪೊಲೀಸ್ ಇಲಾಖೆ’ಯಿಂದ ರಾತ್ರಿ ವೇಳೆ ಮಹಿಳೆಯರಿಗೆ ಉಚಿತ ಪ್ರಯಾಣ : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

FACT CHECK : ‘ಪೊಲೀಸ್ ಇಲಾಖೆ’ಯಿಂದ ರಾತ್ರಿ ವೇಳೆ ಮಹಿಳೆಯರಿಗೆ ಉಚಿತ ಪ್ರಯಾಣ : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು..!

ಬೆಂಗಳೂರು : ಪೊಲೀಸ್ ಇಲಾಖೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ರಾಜ್ಯ ಪೊಲೀಸ್ ಇಲಾಖೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ.

ಪೊಲೀಸ್ ಇಲಾಖೆ ಸ್ಪಷ್ಟನೆ

ಗಮನಿಸಿ !! ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಯಂತ್ರಣ ಕೊಠಡಿಗೆ ಕರೆ ಮಾಡಿದಲ್ಲಿ, ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಮೆಸೇಜ್ ಹರಿದಾಡುತ್ತಿದ್ದು, ಈ ಮಾಹಿತಿಯು ಸುಳ್ಳಾಗಿದೆ. ತುರ್ತು ಸಹಾಯಕ್ಕಾಗಿ 112 ಗೆ ಕರೆಮಾಡಿ ಎಂದು ರಾಜ್ಯ ಪೊಲೀಸ್ ಇಲಾಖೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ.

ಏನಿದು ವೈರಲ್ ಮೆಸೇಜ್

ಪೊಲೀಸರು ಟ್ರಾವೆಲ್ ಸ್ಕೀಂ ಎಂಬ ಯೋಜನೆ ಆರಂಭಿಸಿದ್ದಾರೆ. ಈ ಮೂಲಕ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುತ್ತಾರೆ.ಜೊತೆಗೆ ಒಂಟಿ ಮಹಿಳೆಯರಿಗೆ ವಾಹನ ಸಿಗದಿದ್ದರೆ ಸಹಾಯವಾಣಿ ಸಂಖ್ಯೆ 1091 ಅಥವಾ 7837018555 ಗೆ ಕರೆ ಮಾಡಿದರೆ ಪೊಲೀಸರು ಮನೆಗೆ ಬಿಡುವ ವ್ಯವಸ್ಥೆ ಮಾಡಲಿದ್ದಾರೆ ಎಂಬ ಸುಳ್ಳು ಸಂದೇಶ ಭಾರಿ ವೈರಲ್ ಆಗಿತ್ತು. ಜೊತೆಗೆ ಈ ಮೆಸೇಜ್ನ್ನು ಎಲ್ಲಾ ಮಹಿಳೆಯರಿಗೆ ಫಾರ್ವರ್ಡ್ ಮಾಡಿ ಎಂದೂ ಸಂದೇಶದಲ್ಲಿ ಹೇಳಲಾಗಿತ್ತು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...