alex Certify BREAKING NEWS: ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಕಾರ್ಖಾನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಕಾರ್ಖಾನೆ

ಮೈಸೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಾರ್ಖಾನೆ ಹೊತ್ತಿ ಉರಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ರಫೀಕ್ ಎಂಬುವವರ ಅಗರಬತ್ತಿ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಹಲವು ವಸ್ತುಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...