ಚಿಕ್ಕಮಗಳೂರು : ಭಾರತೀಯ ಸೇನೆ ನೇಮಕಾತಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ (23) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೇನೆಗೆ ಸೇರಬೇಕು ಎಂದು ಆಸೆ ಇಟ್ಟುಕೊಂಡಿದ್ದ ಯುವಕ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.