
ಬೆಂಗಳೂರು: ಈ ಬಾರಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಮತ್ತೆ ಅದೇ ಶಾಲೆಯಲ್ಲಿ ಮರು ದಾಖಲಾತಿ ಮಾಡಿಕೊಳ್ಳಬೇಕೆಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಆದೇಶವಿದ್ದರೂ ಸರ್ಕಾರಿ ಶಾಲೆಗಳಲ್ಲಿ ಫೇಲಾದ ಮಕ್ಕಳನ್ನು ಮರು ದಾಖಲಾತಿ ಮಾಡಿಕೊಳ್ಳಲು ಕೆಲವು ಶಾಲೆಗಳ ಮುಖ್ಯೋಪಾಧ್ಯಾಯರು ಹಿಂದೇಟು ಹಾಕುತ್ತಿದ್ದಾರೆ. ಮರು ದಾಖಲಾತಿ ಸಿಗದ ಕಾರಣ ಮಕ್ಕಳು ಅತಂತ್ರರಾಗಿದ್ದು, ಪೋಷಕರು ಆತಂಕಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಫೇಲಾದ ಮಕ್ಕಳಿಗೆ ಮರು ದಾಖಲಾತಿಗೆ ಅವಕಾಶ ನೀಡಬೇಕು. ಎಲ್ಲ ಮಕ್ಕಳಿಗೆ ಸಿಗುವ ಮೂಲ ಸೌಲಭ್ಯವನ್ನು ಈ ಮಕ್ಕಳಿಗೂ ಕಲ್ಪಿಸಬೇಕು. ಯಾವುದೇ ತಾರತಮ್ಯ ಮಾಡುವಂತಿಲ್ಲ. ಪಠ್ಯೇತರ ಚಟುವಟಿಕೆಗೆ ಅವಕಾಶ ನೀಡಬೇಕೆಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.