ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿಯಲ್ಲಿ ನಕಲಿ ಖಾತೆಗಳನ್ನು (ಒಂದಕ್ಕಿಂತ ಹೆಚ್ಚು ಹೊಂದಿರುವ) ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ (RRB) ಸೂಚಿಸಿದ್ದಾರೆ.
ಪ್ರಧಾನ ಮಂತ್ರಿ ಮುದ್ರಾ ಯೋಜನೆ ಹೆಚ್ಚಿನ ಜನರಿಗೆ ಲಭ್ಯವಾಗುವಂತೆ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಎಲ್ಲಾ ಆರ್ ಆರ್ ಬಿ ಗಳಿಗೆ ಡಿಜಿಟಲ್ ಸಾಮರ್ಥ್ಯಗಳನ್ನು ಅಳವಡಿಸಿಕೊಳ್ಳಲು ಕೇಳಲಾಗಿದೆ.
ಎಂಎಸ್ಎಂಇ ಇಲಾಖೆ ಗುರುತಿಸಿದ ಕ್ಲಸ್ಟರ್ಗಳಲ್ಲಿ ಆರ್ಆರ್ಬಿಗಳು ಶಾಖೆಗಳನ್ನು ತೆರೆಯುವುದನ್ನು ಖಚಿತಪಡಿಸಿಕೊಳ್ಳಲು ಸಚಿವರು ಪ್ರಾಯೋಜಿತ ನಿಗದಿತ ಬ್ಯಾಂಕುಗಳಿಗೆ ಸಲಹೆ ನೀಡಿದರು. ಸಚಿವರು ಬುಧವಾರ ದೆಹಲಿಯಲ್ಲಿ ಆರ್ ಆರ್ ಬಿ ಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು. ಹಣಕಾಸು ಸಚಿವಾಲಯದ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಆರ್ಬಿಐ, ನಬಾರ್ಡ್ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.