alex Certify CBSE 10 – 12 ನೇ ತರಗತಿ ಪರೀಕ್ಷೆ ಕುರಿತಂತೆ ಮಂಡಳಿಯಿಂದ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CBSE 10 – 12 ನೇ ತರಗತಿ ಪರೀಕ್ಷೆ ಕುರಿತಂತೆ ಮಂಡಳಿಯಿಂದ ಮಹತ್ವದ ಮಾಹಿತಿ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ 10 ಮತ್ತು 12 ನೇ ತರಗತಿಯ ಪರೀಕ್ಷೆಗಳ ದಿನಾಂಕದ ಪ್ರತಿ ನಕಲಿ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದೆ.

ಮಂಡಳಿಯು ಪರೀಕ್ಷೆಯ ದಿನಾಂಕವನ್ನು ಇನ್ನೂ ಪ್ರಕಟಿಸಿಲ್ಲ. ಶೀಘ್ರದಲ್ಲೇ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಡೇಟ್‌ಶೀಟ್‌ಗಳ ಬಹು ಆವೃತ್ತಿಗಳು ನಕಲಿಯಾಗಿದೆ. ಪರೀಕ್ಷೆಯ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಮತ್ತು ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತ ಮಾಹಿತಿಗಾಗಿ ಕಾಯಬೇಕು” ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೆಬ್ರವರಿ 15, 2023 ರ ಬಳಿಕ 2022-23ರ ಶೈಕ್ಷಣಿಕ ವರ್ಷಕ್ಕೆ 10 ಮತ್ತು 12 ನೇ ತರಗತಿಗೆ ಪರೀಕ್ಷೆಗಳನ್ನು ನಡೆಸುವುದಾಗಿ ಮಂಡಳಿಯು ಈ ಹಿಂದೆ ಘೋಷಿಸಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...