ಬೆಂಗಳೂರು: ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದ 1436 ನಕಲಿ ವೈದ್ಯರು ಸಿಕ್ಕಿ ಬಿದ್ದಿದ್ದು, ಅಂತಹ ವೈದ್ಯರ ಪಟ್ಟಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.
ಅಲೋಪತಿ, ನ್ಯಾಚುರೋಪತಿ, ಆಯುರ್ವೇದ, ಹೋಮಿಯೋಪತಿ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದ ನಕಲಿ ವೈದ್ಯರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೀದರ್ ನಲ್ಲಿ 423, ಕೋಲಾರ 179, ಬೆಳಗಾವಿ 170, ಕಲಬುರಗಿ 82, ಶಿವಮೊಗ್ಗ 74, ಧಾರವಾಡ 70, ಬೆಂಗಳೂರು 67 ಸೇರಿದಂತೆ ವಿವಿಧೆಡೆ ನಕಲಿ ವೈದ್ಯರು ಪತ್ತೆಯಾಗಿದ್ದಾರೆ.
ನಕಲಿ ವೈದ್ಯರನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದ್ದು, ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಮೊಕದ್ದಮೆ ದಾಖಲಿಸಿದರೂ ನಕಲಿ ವೈದ್ಯರ ಕಾಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಂತಹ ನಕಲಿ ವೈದ್ಯರ ಕ್ಲಿನಿಕ್ ಗಳ ಎದುರು ದೊಡ್ಡದಾಗಿ ‘ನಕಲಿ’ ಎಂದು ಕಪ್ಪು ಬಣ್ಣದ ಫಲಕಗಳನ್ನು ಅಳವಡಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.