ಬೆಂಗಳೂರು: ಜಾಮೀನು ಪಡೆಯಲು ಆರೋಪಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಸಿ ಆರೋಪಿಗಳು ಕೋರ್ಟ್ ಗೆ ಮೋಸ ಮಾಡಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಮಾದಕ ವಸ್ತುಗಳು ಹಗೂ ಅಮಲು ಪದಾರ್ಥ ನಿಯಂತ್ರಣ ಕಾಯ್ದೆಯಡಿ 2021ರಲ್ಲಿ ಆದಿತ್ಯಮ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಆರೋಪಿಗೆ ಜಾಮೀನು ನೀಡಿತ್ತು. ಆದರೆ ಆತ ಜಾಮೀನಿಗಾಗಿ ನಕಲಿ ದಾಖಲೆ ಹಾಗೂ ಶ್ಯೂರಿಟಿಯನ್ನು ಕೋರ್ಟ್ ಗೆ ಸಲ್ಲಿಸಿರುವುದು ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ರೈತನೋರ್ವನ ಹೆಸರಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ಜಮೀನು ದಾಖಲೆ ಸೃಷ್ಟಿಸಿ ನಕಲಿ ವ್ಯಕ್ತಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವಿಚಾರ ತಿಳಿದ ಚಿಕಬಳ್ಳಾಪುರದ ರೈತ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ನಕಲಿ ದಾಖಲೆ ಸೃಷ್ಟಿಸಿ, ಆರೋಪಿಗಳು ಕೋರ್ಟ್ ಗೆ ಮೋಸ ಮಾಡಿ ಜಾಮಿನು ಪಡೆದಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.