alex Certify ಯತೀಂದ್ರ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಫೇಸ್ ಬುಕ್ ಪೋಸ್ಟ್ ; ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯತೀಂದ್ರ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಫೇಸ್ ಬುಕ್ ಪೋಸ್ಟ್ ; ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಅಭ್ಯರ್ಥಿ ಕುಸುಮಾ ವಿರುದ್ಧ ಕೂಡ ಕೆಟ್ಟದಾಗಿ ಪೋಸ್ಟ್ ಹಾಕಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಟಿಪ್ಪು ಸುಲ್ತಾನ್ ಫೋಟೋ ಎಡಿಟ್ ಮಾಡಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದ್ದು, ಕಾಂಗ್ರೆಸ್ ಮುಖಂಡ ಶಶಾಂಕ್ ಗೌಡ ಅವರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...