ಬೆಂಗಳೂರು: ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ WhatsApp ನಲ್ಲಿ ನಕಲಿ ಸಂದೇಶ ಹರಿದಾಡುತ್ತಿದೆ. ಭಾರತ ಚುನಾವಣಾ ಆಯೋಗವು ಮಾತ್ರ ಪತ್ರಿಕಾಗೋಷ್ಠಿಯನ್ನು ನಡೆಸಿ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಸುಳ್ಳು ಮಾಹಿತಿಗಳನ್ನು ನಂಬದೆ ಜಾಗೃತರಾಗಿ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.
ಮಾರ್ಚ್ 2ರಂದು ಲೋಕಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. 28ರ ವರೆಗೆ ನಾಮಪತ್ರ ಸಲ್ಲಿಸಬಹುದು. ಏಪ್ರಿಲ್ 19 ರಂದು ಮತದಾನ ನಡೆಯಲಿದ್ದು, ಮೇ 22 ರಂದು ಮತ ಎಣಿಕೆ ನಡೆಯಲಿದೆ ಎನ್ನುವ ನಕಲಿ ಸಂದೇಶ ಜಾಲತಾಣಗಳಲ್ಲಿ ಹರಿದಾಡಿದ ಬಗ್ಗೆ ಸ್ಪಷ್ಟನೆ ನೀಡಲಾಗಿದ್ದು, ಭಾರತ ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿ ಬಿಡುಗಡೆ ಆಗುವವರೆಗೆ ಚುನಾವಣೆಯ ಕುರಿತು ಯಾವುದೇ ಸುಳ್ಳು ಮಾಹಿತಿಗಳನ್ನು ನಂಬದಂತೆ ತಿಳಿಸಲಾಗಿದೆ.