alex Certify BIG NEWS: ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ನಕಲಿ ಸಂದೇಶ ವೈರಲ್: ಆಯೋಗ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ನಕಲಿ ಸಂದೇಶ ವೈರಲ್: ಆಯೋಗ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ WhatsApp ನಲ್ಲಿ ನಕಲಿ ಸಂದೇಶ ಹರಿದಾಡುತ್ತಿದೆ. ಭಾರತ ಚುನಾವಣಾ ಆಯೋಗವು ಮಾತ್ರ ಪತ್ರಿಕಾಗೋಷ್ಠಿಯನ್ನು ನಡೆಸಿ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಸುಳ್ಳು ಮಾಹಿತಿಗಳನ್ನು ನಂಬದೆ ಜಾಗೃತರಾಗಿ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ಮಾರ್ಚ್ 2ರಂದು ಲೋಕಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. 28ರ ವರೆಗೆ ನಾಮಪತ್ರ ಸಲ್ಲಿಸಬಹುದು. ಏಪ್ರಿಲ್ 19 ರಂದು ಮತದಾನ ನಡೆಯಲಿದ್ದು, ಮೇ 22 ರಂದು ಮತ ಎಣಿಕೆ ನಡೆಯಲಿದೆ ಎನ್ನುವ ನಕಲಿ ಸಂದೇಶ ಜಾಲತಾಣಗಳಲ್ಲಿ ಹರಿದಾಡಿದ ಬಗ್ಗೆ ಸ್ಪಷ್ಟನೆ ನೀಡಲಾಗಿದ್ದು, ಭಾರತ ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿ ಬಿಡುಗಡೆ ಆಗುವವರೆಗೆ ಚುನಾವಣೆಯ ಕುರಿತು ಯಾವುದೇ ಸುಳ್ಳು ಮಾಹಿತಿಗಳನ್ನು ನಂಬದಂತೆ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...